ವಿಜಯಪುರ: ಮಹಿಳೆಯ ಕೈಯಲ್ಲಿದ್ದ ಮೊಬೈಲ್ ಕಿತ್ತುಕೊಂಡು ಪರಾರಿಯಾಗುವ ವೇಳೆ ಕಳ್ಳ ಸ್ಥಳೀಯರ ಕೈಗೆ ಸಿಕ್ಕಿ ಬಿದ್ದಿರುವ ಘಟನೆ ವಿಜಯಪುರ ನಗರದ ಸೇಟ್ಲೈಟ್ ಬಸ್ ನಿಲ್ದಾಣದಲ್ಲಿ ಬುಧವಾರ ನಡೆದಿದೆ. ಸುಧಾ ಎಂಬುವರ ಮೊಬೈಲ್ ಕಿತ್ತುಕೊಂಡು ಕಳ್ಳ ಎಸ್ಕೇಪ್ ಯತ್ನಿಸಿದ್ದಾನೆ. ಈ ವೇಳೆ ಸಿಕ್ಕಿ ಬಿದ್ದ ಕಳ್ಳನಿಗೆ ಚಪ್ಪಲಿ ಏಟು ನೀಡಲಾಗಿದೆ. ತದನಂತರ ಆರೋಪಿಯನ್ನು ಸ್ಥಳೀಯ ಪೊಲೀಸರಿಗೆ ಒಪ್ಪಿಸಲಾಗಿದೆ. ಗಾಂಧಿಚೌಕ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.