ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನದ ಅಂಗವಾಗಿ ಸೆಪ್ಟೆಂಬರ್ 17 ರಂದು ಬಿಜೆಪಿ ಯುವ ಮೋರ್ಚಾ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಲಾಗಿದ ಎಂದು ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಬಸವರಾಜ ಹೂಗಾರ ಹೇಳಿದರು.
ನಗರದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಅಂದು ವಿಜಯಪುರ ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನದ ಅಂಗವಾಗಿ ಆನ್ಲೈನ್ ಮುಖಾಂತರ ನೋಂದಣಿ ಮಾಡಿಕೊಳ್ಳಬಹುದು. ಮೋದಿಯವರ ಜನ್ಮ ದಿನದ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನ ಆಯೋಜಿಸಲಾಗಿದೆ ಎಂದರು.