ವಿಜಯಪುರ: ಇಬ್ಬರು ಮಕ್ಕಳೊಂದಿಗೆ ತಾಯಿ ಬಾವಿಗೆ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಶಿರನಾಳ ಗ್ರಾಮದ ತೋಟದ ವಸ್ತಿಯಲ್ಲಿ ನಡೆದಿದೆ.
ಬಾವಿಗೆ ಜಿಗಿದು ಇಬ್ಬರು ಗಂಡು ಮಕ್ಕಳು ಜೊತೆಯಲ್ಲಿ ತಾಯಿ ಶ್ರೀದೇವಿ ಸಂತೋಷ ಬಿರಾದಾರ (31), ಮಗ ಶ್ರೀಶೈಲ ಬಿರಾದಾರ (7), ಮಹೇಶ ಬಿರಾದಾರ (5) ಆತ್ಮಹತ್ಯೆಗೆ ಶರಣಾಗಿದ್ದಾರೆ. ಆದ್ರೇ ಘಟನೆಗೆ ಕಾರಣ ತಿಳಿದುಬಂದಿಲ್ಲ. ಇನ್ನು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಝಳಕಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.