ವಿಜಯಪುರ: ಇಬ್ಬರು ಹೆಣ್ಣು ಮಕ್ಕಳೊಂದಿಗೆ ತಾಯಿ ಬಾವಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಹಂದಿಗನೂರ ಗ್ರಾಮದಲ್ಲಿ ನಡೆದಿದೆ.
ಅಕ್ಕಮ್ಮ ಶ್ರೀಶೈಲ ಗುಬ್ಬೇವಾಡ ( 30 ) ಮತ್ತು ಮಕ್ಕಳಾದ ಅವಮ್ಮ (3) ಸಾವಿತ್ರಿ (1) ದುರ್ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಬಾವಿಯಿಂದ ಶವಗಳನ್ನ ಸ್ಥಳೀಯರ ಸಹಾಯದಿಂದ ಹೊರತೆಗೆಯಲಾಗಿದೆ.
ಸ್ಥಳಕ್ಕೆ ದೇವರ ಹಿಪ್ಪರಗಿ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ದೇವರಹಿಪ್ಪರಗಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.