ವಿಜಯಪುರ: ಮತದಾರರ ಆಶೀರ್ವಾದ ನನ್ಮೇಲೆ ಇದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಅಬ್ದುಲ್ ಹಮ್ಮಿದ್ ಮುಶ್ರಿಫ್ ಹೇಳಿದರು.
ವಿಜಯಪುರ ನಗರದಲ್ಲಿ ಮಾಧ್ಯಮದ ಎದುರು ಮಾತನಾಡಿದ ಅವರು, ಕಾಂಗ್ರೆಸ್ನಲ್ಲಿ ಯಾವುದೇ ಭಿನ್ನಮತ ಇಲ್ಲ. 26 ಟಿಕೆಟ್ ಆಕಾಂಕ್ಷಿಗಳು ನನ್ನೊಂದಿಗೆ ಇದ್ದಾರೆ. ಅವರನ್ನು ಒಟ್ಟಿಗೆ ಕರೆದುಕೊಂಡು ಚುನಾವಣೆ ಮಾಡುತ್ತೇನೆ. ಅಲ್ಲದೇ, ಕಾಂಗ್ರೆಸ್ ಪಕ್ಷದಲ್ಲಿ ಹಲವು ಅಭಿವೃದ್ಧಿ ಕೆಲಸಗಳು ಆಗಿದ್ದಾವೆ. ಅದಕ್ಕಾಗಿ ಮತದಾರರ ನನಗೆ ಆಶೀರ್ವಾದ ಮಾಡುವ ಭರವಸೆ ಇದೆ. ಅಲ್ಲದೇ, ನಾಳೆ ಬೆಳಗ್ಗೆ ಕಾಂಗ್ರೆಸ್ ಹಿರಿಯ ನಾಯಕರು ಸೇರಿದಂತೆ ಕಾರ್ಯಕರ್ತರೊಂದಿಗೆ ನಾಮಪತ್ರ ಸಲ್ಲಿಕೆ ಮಾಡುತ್ತೇನೆ ಎಂದರು.