ವಿಜಯಪುರ: ನಾಡದೇವಿಯ ನವರಾತ್ರಿ ಉತ್ಸವ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 5ರ ವರೆಗೂ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ತಾಂಬಾ ಗ್ರಾಮದಲ್ಲಿ ನಡೆಯಲಿದೆ ಎಂದು ಜೆಡಿಎಸ್ ಶಾಸಕ ದೇವಾನಂದ್ ಚವ್ಹಾಣ ಮಾಹಿತಿ ನೀಡಿದರು.
ನಗರದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಶ್ರೀ ಅಂಬಾಭವಾನಿ ಎಜ್ಯುಕೇಶನ್ ಟ್ರಸ್ಟ್, ತಾಂಬಾ ಗ್ರಾಮಸ್ಥರು, ಸದ್ಭಕ್ತರ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಅಂದು ಕಾರ್ಯಕ್ರಮವನ್ನು ಜಿಲ್ಲಾಡಳಿತ ವಿಜಯಮಹಾಂತೇಶ ದಾನಮ್ಮನವರ ಉದ್ಘಾಟನೆ ಮಾಡಲಿದ್ದಾರೆ. ಇನ್ನು ಕಾರ್ಯಕ್ರಮದಲ್ಲಿ ಎಸ್ಪಿ ಆನಂದಕುಮಾರ, ಜಿಲ್ಲಾ ಪಂಚಾಯತ ಸಿಇಓ ರಾಹುಲ್ ಶಿಂಧೆ ಸೇರಿದಂತೆ ಗಣ್ಯರು ಭಾಗವಹಿಸಿದ್ದಾರೆ. ದಿವ್ಯ ಸಾನಿಧ್ಯವನ್ನು ಜೋತೀಷ ತಿಲಕ್ ವಹಿಸಲಿದ್ದಾರೆ. ಅಲ್ಲದೇ, ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ಪುರುಷರ, ಮಹಿಳೆಯರ ಮುಕ್ತ ಕಬಡ್ಡಿ ಪಂದ್ಯಾವಳಿ ಹಮ್ಮಿಕೊಳ್ಳಲಾಗಿದೆ. ಅಲ್ಲದೇ, ಉಚಿತ ಕಣ್ಣಿನ ತಪಾಸಣೆ, ರಕ್ತದಾನ ಶಿಬಿರ, ಮದ್ದು ಸುಡುವುದು, ಭಾರ ಎತ್ತುವ ಸ್ಪರ್ಧೆ ಸೇರಿದಂತೆ ವಿವಿಧ ಕಾರ್ಯಕ್ರಮ ನಡೆಯಲಿದೆ ಎಂದರು.