Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಬ್ಯಾಂಕ್ ಗ್ರಾಹಕರೊಂದಿಗೆ ಸಹಾನುಭೂತಿಯಿಂದ ವರ್ತಿಸಿ::

ವಿಜಯಪುರ ::

ಬ್ಯಾಂಕ್ ಗ್ರಾಹಕರೊಂದಿಗೆ ಸಹಾನುಭೂತಿಯಿಂದ ವರ್ತಿಸಿ: ಬ್ಯಾಂಕರ್ಸ್ ಗಳಿಗೆ ಜಿ.ಪಂ. ಸಿಇಓ ರಿಷಿ ಆನಂದ ಸೂಚನೆ.
ವಿಜಯಪುರ. ಬ್ಯಾಂಕಿಗೆ ಕಾರ್ಯ ನಿಮಿತ್ತ ಆಗಮಿಸಿದ ಸಂದರ್ಭದಲ್ಲಿ ಅವರ ಕುಂದು ಕೊರತೆ ಆಲಿಸುವ ಮೂಲಕ ಅವರಿಗೆ ಸರಿಯಾಗಿ ಸ್ಪಂದನೆ ಮಾಡಬೇಕು. ಬ್ಯಾಂಕುಗಳಿಗೆ ಆಗಮಿಸುವ ಗ್ರಾಹಕರೊಂದಿಗೆ ಸಹಾನುಭೂತಿಯಿಂದ ವರ್ತಿಸಬೇಕು. ಸಕಾರಾತ್ಮಕ ಮನೋಭಾವದೊಂದಿಗೆ ಅವರ ಸಮಸ್ಯೆಗಳಿಗೆ ಕಿವಿಯಾಗಬೇಕು. ಆರ್.ಬಿ.ಐ ಮಾರ್ಗಸೂಚಿ ಪ್ರಕಾರ ಬ್ಯಾಂಕ್ ಯೋಜನೆಗಳ ಬಗ್ಗೆ ಗ್ರಾಹಕರಿಗೆ ಜಾಗೃತಿ ಮೂಡಿಸಬೇಕು ಮತ್ತು ಸೌಲಭ್ಯಗಳ ಕುರಿತು ಮಾರ್ಗದರ್ಶನ ನೀಡಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಅವರು ಹೇಳಿದರು ಅವರು, ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಗ್ರಣೀಯ (ಲೀಡ್) ಬ್ಯಾಂಕ್ ವತಿಯಿಂದ ತ್ರೈಮಾಸಿಕ ಡಿಸ್ಟ್ರಿಕ್ಟ್ ಕನ್ಸಲ್ಟೇಟಿವ್ ಕಮಿಟಿ ಸಭೆ ಹಾಗೂ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಈ ಸೂಚನೆ ನೀಡಿದರು.

ಸಾಲ ಸೌಲಭ್ಯಗಳಿಗಾಗಿ ಅರ್ಜಿ ಸಲ್ಲಿಸಿದವರ ಅರ್ಜಿಗಳನ್ನು ಬಾಕಿ ಬಾಕಿ ಉಳಿಸಿಕೊಳ್ಳುವಂತಿಲ್ಲ. ಬ್ಯಾಂಕ್ ಸಾಲಗಳಿಗೆ ಅರ್ಜಿ ಸಲ್ಲಿಸಿದಾಗ ಒಂದು ವೇಳೆ ದಾಖಲಾತಿಗಳು ಅಪೂರ್ಣ ಇದ್ದಲ್ಲಿ ಗ್ರಾಹಕರಿಗೆ ಸರಿಯಾದ ಮಾರ್ಗದರ್ಶನ ಮಾಡಬೇಕು. ಪ್ರತಿಯೊಬ್ಬ ಗ್ರಾಹಕರ ಅರ್ಜಿಗಳನ್ನು ನಿಗದಿತ ಸಮಯದಲ್ಲಿ ವಿಲೇವಾರಿ ಮಾಡಲೇಬೇಕು. ಸರ್ಕಾರವು ಜಾರಿಗೊಳಿಸುವ ಯೋಜನೆಗಳ ಲಾಭ ಅರ್ಹರಿಗೆ ತಲುಪಿಸುವ ನಿಟ್ಟಿನಲ್ಲಿ ಬ್ಯಾಂಕಿನಲ್ಲಿ ಅರ್ಹ ಫಲಾನುಭವಿಗಳ ದಾಖಲೆ ಅನುಸಾರ ಬ್ಯಾಂಕ್ ಸಾಲ ಸೌಲಭ್ಯ ಅರ್ಜಿ ಪರಿಶೀಲನೆ ನಡಸಿ ಬೇಗ ಇತ್ಯರ್ಥಗೊಳಿಸಬೇಕು.. ಎಲ್ಲಾ ಯೋಜನೆಗಳ ಸದುಪಯೋಗ ಪಡಿಸಿಕೊಳ್ಳುವಂತೆ ಫಲಾನುಭವಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು.

ವಿವಿಧ ಇಲಾಖೆಗಳಡಿ ಇರುವ ಯೋಜನೆಗಳಾದ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ(ಎನ್.ಆರ್.ಎಲ್.ಎಮ್) ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಇರುವ ಉದ್ಯೋಗಿನಿ ಯೋಜನೆ, ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಡಿ ಇರುವ ಸ್ವಾವಲಂಭಿ ಸಾರಥಿ ಯೋಜನೆ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಸ್ವಾವಲಂಭಿ ಟ್ಯಾಕ್ಸಿ, ಗೂಡ್ಸ್, ಆಟೋ ರಿಕ್ಷಾ ಯೋಜನೆಗಳು, ಡಾ. ಬಿ. ಆರ್. ಅಂಬೇಡ್ಕರ್ ನಿಗಮದ ಯೋಜನೆಗಳು, ಪ್ರಧಾನ ಮಂತ್ರಿಗಳ ಉದ್ಯೋಗ ಸೃಷ್ಟಿ ಕಾರ್ಯಕ್ರಮ, ಸಮಾಜ ಕಲ್ಯಾಣ ಇಲಾಖೆಯ ಉದ್ಯಮ ಶೀಲತಾ, ಸ್ವಾವಲಂಭಿ ಸಾರಥಿ, ಪ್ರಧಾನ ಮಂತ್ರಿ ಆವಾಸ್ ಯೋಜನೆ(ನಗರ), ಕೃಷಿ ಇಲಾಖೆಯ ಪ್ರಧಾನ ಮಂತ್ರಿ ಸೂಕ್ಷ್ಮ ಆಹಾರ ಸಂಸ್ಕರಣಾ ಉದ್ದಿಮೆಗಳ ಔಪಚಾರಿಕೀಕರಣ ಯೋಜನೆ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ, ಹೆಸ್ಕಾಂ ಇಲಾಖೆಯ ಪ್ರಧಾನ ಮಂತ್ರಿ ಸೂರ್ಯ ಘರ್: ಮುಫ್ತ್ ಬಿಜ್ಲಿ ಯೋಜನೆ, ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ, ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ, ಅಟಲ್ ಪಿಂಚಣಿ ಯೋಜನೆಗಳ ಅಡಿಯಲ್ಲಿ ಅನೇಕ ಫಲಾನುಭವಿಗಳು ಸಾಲ ಸೌಲಭ್ಯಗಳಿಗಾಗಿ ಅರ್ಜಿ ಸಲ್ಲಿಸಿರುತ್ತಾರೆ. ಆದರೆ ಇಂತಹ ಅರ್ಜಿಗಳನ್ನು ಬ್ಯಾಂಕುಗಳಲ್ಲಿ ಬಾಕಿ ಉಳಿಸಿಕೊಂಡಿರುವುದು ಗಮನಕ್ಕೆ ಬಂದಿರುತ್ತದೆ. ಫಲಾನುಭವಿಗಳ ಬಾಕಿ ಉಳಿದ ಅರ್ಜಿಗಳನ್ನು ಪರಿಶೀಲಿಸಿ ಅತ್ಯಂತ ತುರ್ತಾಗಿ ವಿಲೇವಾರಿಗೆ ಕ್ರಮವಹಿಸಬೇಕು. ಒಂದು ವಾರದಲ್ಲಿ ಬಾಕಿ ಉಳಿದ ಎಲ್ಲಾ ಅರ್ಜಿಗಳನ್ನು ಪರಿಶೀಲಿಸಿ ಸಂಪೂರ್ಣವಾಗಿ ವಿಲೇವಾರಿ ಮಾಡುವುದು.ಒಂದು ವೇಳೆ ವಿಳಂಬವಾದಲ್ಲಿ ಸಂಬAದಪಟ್ಟ ಬ್ಯಾಂಕ್ ವ್ಯವಸ್ಥಾಪಕರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಯೋಜನಾ ನಿರ್ದೇಶಕರಾದ ಅಶೋಕ ಕಲಘಟಗಿ, ಜಿಲ್ಲಾ ಅಗ್ರಣೀಯ ಬ್ಯಾಂಕ್ ವ್ಯವಸ್ಥಾಪಕ (ಲೀಡ್ ಬ್ಯಾಂಕ ಡಿಸ್ಟ್ರಿಕ್ಟ್ ಮ್ಯಾನೇಜರ್) ಬಿ. ಸಿದ್ದಯ್ಯ, ಆರ್.ಬಿ.ಐ ವ್ಯವಸ್ಥಾಪಕರಾದ ಸಿಲ್ ಪ್ರಿಯಾ ಗೌತಮ್, ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.

Author
Karnataka 1 News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

karnataka1news.com

Domain Age: 4 years, 10 months
ಸಂಪೂರ್ಣವಾಗಿ ಸಿದ್ಧವಾಗಿರುವ ಈ ಪ್ರತಿಷ್ಠಿತ ಡಿಜಿಟಲ್ ನ್ಯೂಸ್ ಪೋರ್ಟಲ್ ತಕ್ಷಣದ ಹಸ್ತಾಂತರಕ್ಕೆ ಲಭ್ಯವಿದೆ. ಪತ್ರಕರ್ತರು, ಮಾಧ್ಯಮ ಸಂಸ್ಥೆಗಳು ಅಥವಾ ಡಿಜಿಟಲ್ ಉದ್ಯಮಿಗಳಿಗೆ ಇದು ಸುವರ್ಣಾವಕಾಶ. ಉತ್ತಮ ಬೆಲೆ ಹಾಗೂ ತ್ವರಿತ ವರ್ಗಾವಣೆಗೆ ಈಗಲೇ ಸಂಪರ್ಕಿಸಿ.
This fully configured, turnkey digital news portal is available for immediate acquisition. High SEO value and ready to publish from Day 1 - ideal for media houses, journalists, and entrepreneurs. Serious inquiries only. Contact now for quick deal.
Contact / Contact Us
LATEST
*ರಾಷ್ಟ್ರ ಧ್ವಜಕ್ಕೆ ಅಪಮಾನ*ಮಕ್ಕಳ ಜೀವನದ ಜೊತೆ ಚೆಲ್ಲಾಟ, ಡಿಡಿಪಿಐನಿಂದ ದಿನಕ್ಕೊಂದು ಆದೇಶ, ಶಿಕ್ಷಣ ಇಲಾಖೆಯಲ್ಲೇನಿದು ಹುಚ್ಚಾಟ?ಯುವಕರು ದೇಶದ ಶಕ್ತಿ,,, ಸುನಿಲಗೌಡ ಪಾಟೀಲಬ್ಯಾಂಕ್ ಗ್ರಾಹಕರೊಂದಿಗೆ ಸಹಾನುಭೂತಿಯಿಂದ ವರ್ತಿಸಿ::ಟ್ರಾಫಿಕ್ ಪೋಲಿಸರೇ ಏನಿದು ನಿಮ್ಮ ಕೆಲಸ ???*ಆರೋಗ್ಯಯುತ ಜೀವನಕ್ಕಾಗಿ ಯೋಗ ದೈನಂದಿನ ಭಾಗವಾಗಿಸಿಕೊಳ್ಳಿ* -ಜಿಲ್ಲಾಧಿಕಾರಿ ಡಾ. ಆನಂದ್ ಕೆ.ಪೊಲೀಸ್ ಅಧಿಕಾರಿ ವಿರುದ್ಧವೇ ಪೊಲೀಸ್‌ರಿಂದ ದೂರು..?ಅಕ್ರಮದ ಮೂಲಕ ಅಧಿಕಾರ ಹಿಡಿಯಲು ಹಾಲಿ ಅಧ್ಯಕ್ಷರ ಪ್ರಯತ್ನ*ಕನ್ನೂರ ಶಾಂತಿಕುಟೀರ ಆಶ್ರಮದಲ್ಲಿ ಉಚಿತ ಶೈಕ್ಷಣಿಕ ಹಾಗೂ ಆಧ್ಯಾತ್ಮಿಕ ಬೇಸಿಗೆ ಶಿಬಿರ*: ಏಪ್ರಿಲ್ 10 ರಿಂದ ಮೇ 10 ರ ವರೆಗೆ ವಿದ್ಯಾರ್ಥಿಗಳಿಗೆ ಜ್ಞಾನದಾಸೋಹ.ವಿಜಯಪುರ ಐತಿಹಾಸಿಕ ಕೆರೆಯಲ್ಲಿ ಮೂವರ ಸಾವು