ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ರೌಡಿಶೀಟರ್ಗಳ ಮೇಲೆ ನಿಗಾ ಇರಿಸಲಾಗಿದೆ ಎಂದು ಎಸ್ಪಿ ಎಚ್ಡಿ ಆನಂದಕುಮಾರ ಹೇಳಿದರು.
ವಿಜಯಪುರ ನಗರದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈಗಾಗಲೇ ರೌಡಿಪರೇಡ್ ನಡೆಸಿ ಸೆಕ್ಯುರಿಟಿ ಕೇಸ್ ಹಾಕಲಾಗಿದೆ. ಅವರಿಂದ ಬಾಂಡ್ ಕೂಡ ಬರೆಯಿಸಿಕೊಳ್ಳಲಾಗಿದೆ. ಅವರಿಂದ ಯಾವುದೇ ಅಕ್ರಮ ಚಟುವಟಿಕೆಯಲ್ಲಿ ಪಾಲ್ಗೊಳ್ಳದಂತೆ ಬರೆಯಿಸಿಕೊಳ್ಳಲಾಗಿದೆ. ಇನ್ಮುಂದೆ ಅಂಥ ಅಕ್ರಮ ಚಟುವಟಿಕೆಗಳಲ್ಲಿ ಪಾಲ್ಗೊಂಡರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.