ವಿಜಯಪುರ: ರೈಲು ಹಳಿ ದಾಟುವ ವೇಳೆಯಲ್ಲಿ ರೈಲು ಡಿಕ್ಕಿ ಹೊಡೆದ ಪರಿಣಾಮ ವೃದ್ದನೊರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ನಗರದ ಇಬ್ರಾಹಿಂಪುರ ರೈಲ್ವೆ ಗೇಟ್ ಬಳಿ ನಡೆದಿದೆ. ಶಿವಪ್ಪ ಬಿರಾದಾರ (75) ಮೃತ ದುರ್ದೈವಿ. ಬಯಲು ಬಹಿರ್ದೆಸೆಗೆಂದು ಬಂದಿದ್ದ ವೇಳೆಯಲ್ಲಿ ಹಳಿ ದಾಟುವಾಗ ರೈಲು ಡಿಕ್ಕಿಯಿಂದಾಗಿ ಅಸುನೀಗಿದ್ದಾನೆ. ಇನ್ನು ಸ್ಥಳಕ್ಕೆ ರೈಲ್ವೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ರೈಲ್ವೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.