ವಿಜಯಪುರ: ಜಿಲ್ಲಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದ ಮನೆಯ ಚಾವಣಿ ಕುಸಿದು ವೃದ್ದೆ ಅಸುನೀಗಿರುವ ಘಟನೆ ವಿಜಯಪುರ ತಾಲ್ಲೂಕಿನ ಕನ್ನೂರು ಗ್ರಾಮದಲ್ಲಿ ನಡೆದಿದೆ. 60 ವರ್ಷದ ಶಿವಮ್ಮ ಸಾವಳಗಿ ಸಾವನ್ನಪ್ಪಿದ ವೃದ್ದೆ. ರಾತ್ರಿ ಸುರಿದ ಮಳೆಗೆ ಕುಸಿದು ಬಿದ್ದ ಮನೆಯ ಮೇಲ್ಚಾವಣಿ ಕುಸಿದು ಈ ದುರ್ಘಟನೆ ಸಂಭವಿಸಿದೆ. ವಿಜಯಪುರ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.