ಮೈಸೂರು:
ರಾಜ್ಯದಲ್ಲಿ ಈಗಿರುವ ಕಾಂಗ್ರೇಸ್ ನೇತೃತ್ವದ ಸರ್ಕಾರದ ಹಗರಣಗಳ ಬಗ್ಗೆ ವಿರೋಧ ಪಕ್ಷಗಳಾದ ಬಿಜೆಪಿ & ಜೆಡಿಎಸ್ ನಡೆಸಿರುವ ಪಾದ ಯಾತ್ರೆಗೆ ಟಕ್ಕರ್ ಕೊಡಲು ಮುಂದಾಗಿರುವ ಕಾಂಗ್ರೇಸ್ ಪಕ್ಷದ ಮುಖಂಡರು ಇದೆ ಆ,09 ರಂದು ಮೈಸೂರಿನ ಮಹಾರಾಜ ಕಾಲೇಜಿನ ಆವರಣದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದ್ದು ಇಂದು ಸಿಎಂ ಸಿದ್ದರಾಮಯ್ಯ ಅವರು ಸ್ಥಳಕ್ಕೆ ಬೇಟಿ ನೀಡಿ ಪರಿಶಿಲನೆ ನಡೆಸಿದರು.
ಈ ವೇಳೆ ಸಚಿವರಾದ ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹಾಗೂ ಸ್ಥಳೀಯ ಮುಖಂಡರು ಈ ವೇಳೆ ನನ್ನೊಂದಿಗಿದ್ದರು.