ವಿಜಯಪುರ: ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ಪಟ್ಟಣದಲ್ಲಿ ನಡೆದಿದೆ. ಗೊಲ್ಲಾಳ ಭೀಮಶಿ ಹಂಚಿನಾಳ ಬಂಧಿತ ಆರೋಪಿ. ಇನ್ನು ಬಬಲೇಶ್ವರ ತಾಲ್ಲೂಕಿನ ದೇವರಗೆಣ್ಣೂರ ಗ್ರಾಮದಲ್ಲಿ ಬೈಕ್ ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದನು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಪೊಲೀಸರು ತನಿಖೆ ನಡೆಸಿ 2.80 ಲಕ್ಷ ಮೌಲ್ಯದ 17 ಬೈಕ್ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತು ಬಬಲೇಶ್ವರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.