ವಿಜಯಪುರ: ಜಿಲ್ಲೆಯಲ್ಲಿ ಶಾಲಾ ಮಕ್ಕಳು ಹಾಗೂ ಶಿಕ್ಷಕರಿಗೆ ಕೋವಿಡ್ 19 ಬೆಂಬಿಡದೇ ಕಾಡುತ್ತಿದೆ. ಶಾಲಾ ಮಕ್ಕಳಿಗೆ ಕೋವಿಡ್ ದೃಢ ಹಿನ್ನಲೆ ಜಿಲ್ಲೆಯ ಸಿಂದಗಿ ಪಟ್ಟಣದ ಶಾಲೆಗೆ ಒಂದು ವಾರ ರಜೆಯನ್ನು ಜಿಲ್ಲಾಧಿಕಾರಿ ಪಿ. ಸುನೀಲಕುಮಾರ ಘೋಷಿಸಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೂವಿನಹಳ್ಳಿಯ 3 ಮಕ್ಕಳು, 3 ಶಿಕ್ಷಕರಿಗೆ ಕೊರೋನಾ ದೃಢವಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಮಾಹಿತಿ ನೀಡಿದ್ದಾರೆ.