ವಿಜಯಪುರ: ಚಲಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಲಾರಿ ಹೊತ್ತಿ ಉರಿದಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಝಳಕಿ ರಸ್ತೆಯಲ್ಲಿ ನಡೆದಿದೆ. ಲಾರಿ ಸೊಲ್ಲಾಪುರ ಮಾರ್ಗವಾಗಿ ವಿಜಯಪುರಕ್ಕೆ ಬರುವ ವೇಳೆಯಲ್ಲಿ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಲಾರಿ ಚಾಲಕ ಬಚಾವ್ ಆಗಿದ್ದಾನೆ. ಇನ್ನ ಲಾರಿ ಮಾಲೀಕನ ಹೆಸರು ತಿಳಿದುಬಂದಿಲ್ಲ. ಅಲ್ಲದೇ, ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ವಿಡಿಯೋ ಸೆರೆ ಹಿಡಿದಿದ್ದಾರೆ. ಝಳಕಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.