ವಿಜಯಪುರ: ಪಂಚಮಸಾಲಿ ಹೋರಾಟಕ್ಕೆ ರಾಜ್ಯ ಸರ್ಕಾರ ಸ್ಪಂದನೆ ನೀಡುತ್ತಿಲ್ಲ ಎಂದು ಪಂಚಮಸಾಲಿ ಸಮಾಜದ ಮುಖಂಡ ಶಂಕರಗೌಡ ಬಿರಾದಾರ ಹೇಳಿದರು.
ವಿಜಯಪುರದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವುದಾಗಿ ಸರ್ಕಾರ ಕಾಲ ಹರಣ ಮಾಡುತ್ತಿದೆ. ಸರ್ಕಾರ ಪಂಚಮಸಾಲಿ ಸಮುದಾಯಕ್ಕೆ ಅನ್ಯಾಯ ಮಾಡಿದೆ. ಅದಕ್ಕಾಗಿ
ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿರುವ ಸೆಪ್ಟೆಂಬರ್ 19ರಂದು ಸಿಎಂ ಮನೆ ಮುಂದೆ ಬೃಹತ್ ಧರಣಿ ಸತ್ಯಾಗ್ರಹಕ್ಕೆ ಹಮ್ಮಿಕೊಳ್ಳಲಾಗಿದೆ. ಇನ್ನೂ
ರಾಜ್ಯದ ಪಂಚಮಸಾಲಿ ಮುಖಂಡರು ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.