ಗದಗ: ಬಸ್ ಎಕ್ಸ್ಲ್ ಕಟ್ಯಾಗಿರುವ ಪರಿಣಾಮ ಕೆಎಸ್ಆರ್ಟಿಸಿ ಸಾರಿಗೆ ಬಸ್ ಪಲ್ಟಿಯಾಗಿ 30 ಕ್ಕೂ ಹೆಚ್ಚು ಜನರಿಗೆ ಗಾಯಗೊಂಡಿರುವ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ಸಮೀಪದ ಗೋವನಾಳ ಗ್ರಾಮದ ಬಳಿ ನಡೆದಿದೆ.
ಇನ್ನು ಗದಗದಿಂದ ಹಾವೇರಿಗೆ ಹೊರಟಿದ್ದ ಬಸ್ನ್ನ ಎಕ್ಸೆಲ್ ಕಟ್ ಆಗಿದ್ದರಿಂದ ಅಪಘಾತ ನಡೆದಿದೆ ಎನ್ನಲಾಗಿದೆ. ಇನ್ನು ಗಾಯಾಳುಗಳಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿದೆ. ಅಲ್ಲದೇ, ಗಂಭೀರವಾಗಿ ಗಾಯಗೊಂಡ 10 ಗಾಯಾಳುಗಳನ್ನ ಜಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಲಕ್ಷ್ಮೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.