ವಿಜಯಪುರ: ಚಾಲಕನ ಅಜಾಗರೂಕತೆಯಿಂದಾಗಿ ಸರ್ಕಾರಿ ಬಸ್ಯೊಂದು ಜಮೀನಿಗೆ ನುಗ್ಗಿರುವ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಮಿಣಜಗಿ ಬಳಿ ನಡೆದಿದೆ. ಅಪಘಾತದಲ್ಲಿ ಬಸ್ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಭಾರೀ ಅನಾಹುತ ತಪ್ಪಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ, ಚಾಲಕ ಸೇರಿದಂತೆ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಚಾಲಕನಿಗೆ ವಿಶ್ರಾಂತಿ ರಹಿತ ಬಿಡುವಿಲ್ಲದ ಸತತ ಚಾಲನಾ ಕರ್ತವ್ಯ ಹಿನ್ನೆಲೆ ನಿದ್ದೆಯ ಮಂಪರಿನಲ್ಲಿ ಚಾಲಕನಿಂದ ಈ ಅಜಾಗರೂಕತೆ ಕಾರಣಕ್ಕೆ ಅಪಘಾತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿ ಮಿಣಜಗಿ ಗ್ರಾಮಸ್ಥರು ಅಭಿಪ್ರಾಯಪಟ್ಟಿದ್ದಾರೆ. ಚಾಲಕ ವಿಜಯಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎನ್ನಲಾಗಿದೆ. ತಾಳಿಕೋಟೆ ಪೊಲೀಸ್ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.
![](https://karnataka1news.com/wp-content/uploads/2023/09/IMG-20230909-WA0060-1024x498.jpg)