ವಿಜಯಪುರ: ಪಾದಚಾರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿರುವ ಪರಿಣಾಮ ಪಾದಚಾರಿ ಅಸುನೀಗಿರುವ ಘಟನೆ ವಿಜಯಪುರ ನಗರದ ಸೊಲ್ಲಾಪುರ ರಸ್ತೆಯಲ್ಲಿ ನಡೆದಿದೆ.
ಸ್ಥಳೀಯ ನಿವಾಸಿ ಭೋಸ್ಲೆ ಅಸುನೀಗಿರುವ ಪಾದಚಾರಿ. ಇನ್ನು ರಸ್ತೆ ದಾಟುವ ವೇಳೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿದೆ. ಬಳಿಕ ಅಪರಿಚಿತ ವಾಹನ ಸವಾರ ಸ್ಥಳದಿಂದ ವಾಹನದ ಸಮೇತ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ಸಂಚಾರಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.