ವಿಜಯಪುರ: ಪಾದಚಾರಿಗೆ ಗೂಡ್ಸ್ ವಾಹನ ಡಿಕ್ಕಿಯಾಗಿರುವ ಪರಿಣಾಮ ಪಾದಚಾರಿ ಅಸುನೀಗಿರುವ ಘಟನೆ ವಿಜಯಪುರ ತಾಲ್ಲೂಕಿನ ಹಿಟ್ನಳ್ಳಿ ಗ್ರಾಮದ ಬಸ್ ನಿಲ್ದಾಣದ ಬಳಿ ನಡೆದಿದೆ. ರಾಮಗೊಂಡ ತಿಕೋಟಿ ಮೃತಪಟ್ಟಿರುವ ದುರ್ದೈವಿ. ಇನ್ನು ರಸ್ತೆ ದಾಟುವಾಗ ಗೂಡ್ಸ್ ವಾಹನ ಡಿಕ್ಕಿಯಾಗಿದೆ. ಇದರಿಂದ ರಾಮಗೊಂಡ ಸಾವನ್ನಪ್ಪಿದ್ದಾನೆ. ಅಲ್ಲದೇ, ಚಾಲಕ ರಾಜೇಂದ್ರ ಕೋಳಿ ವಿರುದ್ಧ ಕೇಸ್ ದಾಖಲಾಗಿದೆ. ಈ ಕುರಿತು ವಿಜಯಪುರ ಗ್ರಾಮೀಣ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.