ವಿಜಯಪುರ: ಪಾದಚಾರಿಗೆ ವಾಹನ ಡಿಕ್ಕಿಯಾಗಿರುವ ಪರಿಣಾಮ ಪಾದಚಾರಿ ಸ್ಥಳದಲ್ಲಿಯೇ ಅಸುನೀಗಿರುವ ಘಟನೆ ವಿಜಯಪುರ ನಗರದ ಮೇಘರಾಜ್ ಹೋಟೆಲ್ ಬಳಿ ಶನಿವಾರ ತಡರಾತ್ರಿ ನಡೆದಿದೆ. ಇನ್ನೂ ಮೃತಪಟ್ಟಿರುವ ಪಾದಚಾರಿಯ ಹೆಸರು ಹಾಗೂ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಅಲ್ಲದೇ, KA 28 Z 9112 ನಂಬರಿನ ಚಾಲಕನಿಂದ ಈ ಅಪಘಾತ ಆಗಿದೆ. ಅಪಘಾತದ ಬಳಿಕ ಸ್ಥಳದಲ್ಲಿ ವಾಹನ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ವಿಜಯಪುರ ಸಂಚಾರಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.