ವಿಜಯಪುರ: ಪ್ಲಾಸ್ಟಿಕ್ ತಯಾರಿಕೆ, ಆಮದು, ಸಂಗ್ರಹಣೆ, ವಿತರಣೆ, ಮಾರಾಟ ಮತ್ತು ಬಳಕೆಯನ್ನು ಜುಲೈ 1ರಿಂದ ನಿಷೇಧಿಸಲಾಗಿದೆ ಎಂದು ವಿಜಯಪುರ ಮಹಾನಗರ ಪಾಲಿಕೆಯ ಆಯುಕ್ತ ವಿಜಯಕುಮಾರ ಮೆಕ್ಕಳಕೆ ತಿಳಿಸಿದ್ದಾರೆ.
ವಿಜಯಪುರ ನಗರದ ಸಾರ್ವಜನಿಕರು, ಕೈಗಾರಿಕೆಗಳು, ವಾಣಿಜ್ಯ ಸಂಸ್ಥೆಗಳಾದ ಮಾಲ್ಗಳು, ಮಾರುಕಟ್ಟೆ ಸ್ಥಳ, ಶಾಪಿಂಗ್ ಕೇಂದ್ರಗಳು, ಸಿನಿಮಾ ಮನೆಗಳು, ಪ್ರವಾಸಿ ಸ್ಥಳಗಳು, ಶಾಲೆಗಳು, ಕಾಲೇಜುಗಳು, ಕಚೇರಿಗಳು, ಆಸ್ಪತ್ರೆಗಳು ಮತ್ತು ಇತರೆ ಸಂಸ್ಥೆಗಳು ಏಕ ಬಳಕೆ ಪ್ಲಾಸ್ಟಿಕ್ನ್ನು ಸಂಪೂರ್ಣವಾಗಿ ಬಳಸುವುದುನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.