ವಿಜಯಪುರ: ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡುತ್ತಿದ್ದ ವಿವಿಧ ಅಂಗಡಿಗಳ ಮೇಲೆ ಚಡಚಣ ಪಟ್ಟಣ ಪಂಚಾಯತಿ ಅಧಿಕಾರಿಗಳು ದಾಳಿಗೈದು ಪ್ಲಾಸ್ಟಿಕ್ ಹಾಗೂ ದಂಡ ವಿಧಿಸಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದಲ್ಲಿ ಸೋಮವಾರ ನಡೆದಿದೆ.
ಪಟ್ಟಣದ ವಿವಿಧ ಪ್ಲಾಸ್ಟಿಕ್ ಮಾರಾಟ ಮಳಿಗೆಗಳ ಮೇಲೆ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಬಿ.ಕೆ. ತಾವಸೆ ನೇತೃತ್ವದಲ್ಲಿ ದಾಳಿ ನಡೆಸಿ, ಅನಧಿಕೃತ ಪ್ಲಾಸ್ಟಿಕ್ ವಶಪಡಿಸಿಕೊಂಡು, 14600 ದಂಡ ವಿಧಿಸಿದ್ದಾರೆ. ಈ ಸಂದರ್ಭದಲ್ಲಿ ಪಟ್ಟಣ
ಪಂಚಾಯತಿ ಆರೋಗ್ಯ ನಿರೀಕ್ಷಕ ಸಚಿನ ಹಿರೇಮಠ, ಸಿಬ್ಬಂದಿ ವರ್ಗ ಹಾಗೂ ಪೌರ ಕಾರ್ಮಿಕರು ಉಪಸ್ಥಿತರಿದ್ದರು.