ವಿಜಯಪುರ: ನಡೆದಾಡುವ ದೇವರು ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳ ಅನಾರೋಗ್ಯ ಹಿನ್ನೆಲೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಶ್ರಮಕ್ಕೆ ಆಗಮಿಸುತ್ತಿದ್ದಾರೆ. ಅದಕ್ಕಾಗಿ ಜ್ಞಾನ ಯೋಗಾಶ್ರಮಕ್ಕೆ ಪೊಲೀಸ್ ಭದ್ರತೆ ಹೆಚ್ಚಳ ಮಾಡಲಾಗಿದೆ. ಯೋಗಾಶ್ರಮ ಸುತ್ತಲೂ ಹೆಚ್ಚಿನ ಪೊಲೀಸ್ ಭದ್ರತೆ ಮಾಡಿದ್ದು, ಗದಗ, ಬಾಗಲಕೋಟೆ ಜಿಲ್ಲೆಯಿಂದ ಪೊಲೀಸ್ ನಿಯೋಜನೆ, ಐವರು DySP, 20 CPI, 50 PSI, 100 ASI, 1000ಕ್ಕೂ ಹೆಚ್ಚು ಕಾನ್ಸ್ಟೇಬಲ್ಗಳು ಭದ್ರತೆಗೆ ನಿಯೋಜನೆ ಮಾಡಲಾಗಿದೆ.