ವಿಜಯಪುರ: ನಡೆದಾಡುವ ದೇವರು ಸಿದ್ಧೇಶ್ವರ ಶ್ರೀಗಳ ಅನಾರೋಗ್ಯ ಹಿನ್ನೆಲೆ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀಗಳ ಆರೋಗ್ಯ ಚೇತರಿಕೆಗೆ ಸೋಮವಾರ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ವಿಜಯಪುರ ಜಿಲ್ಲೆಯ ತಿಕೋಟ ತಾಲೂಕಿನ ಬಿಜ್ಜರಗಿ ಗ್ರಾಮದಲ್ಲಿ
ಸಿದ್ದೇಶ್ವರ ಶ್ರೀಗಳು ಬಾಲ್ಯದಲ್ಲಿ ಮೊದಲು ಧ್ಯಾನಕ್ಕಾಗಿ ಕುಳಿತ ಸ್ಥಳದಲ್ಲಿ ಭಕ್ತರಿಂದ ರಾಮಲಿಂಗೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದರು. ಅಲ್ಲದೇ, ಶ್ರೀಗಳು ಬೇಗ ಗುಣಮುಖವಾಗ್ಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡಿದರು.