ವಿಜಯಪುರ: ಮಹಾನಗರ ಪಾಲಿಕೆಯ ಆಯ-ವ್ಯಯ ಬಜೆಟ್ ಪ್ರಥಮ ಸಾರ್ವಜನಿಕ ಪೂರ್ವಭಾವಿ ಸಭೆಯನ್ನು ಇದೇ ದಿನಾಂಕ : 27-12-2022ರಂದು ಮಹಾನಗರ ಪಾಲಿಕೆ ಮುಖ್ಯ ಕಚೇರಿಯಲ್ಲಿ ಆಯೋಜಿಸಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ತಿಳಿಸಿದ್ದಾರೆ.
ಮಹಾನಗರ ಪಾಲಿಕೆಯ ಪೂರ್ವಭಾವಿ ಸಭೆಯಲ್ಲಿ ಸಾರ್ವಜನಿಕರು, ಕಲ್ಯಾಣ ಸಂಸ್ಥೆಯ ಪದಾಧಿಕಾರಿಗಳು, ವ್ಯಾಪಾರ ಮತ್ತು ಕೈಗಾರಿಕಾ ಸಂಸ್ಥೆ ಒಕ್ಕೂಟಗಳ ಸದಸ್ಯರು ಮತ್ತು ಇರೆ ಸಂಘ-ಸಂಸ್ಥೆಗಳ ಮುಖ್ಯಸ್ಥರು ಭಾಗವಹಿಸಿ ಸೂಕ್ತ ಸಲಹೆ-ಸೂಚನೆಗಳನ್ನು ನೀಡುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.