ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮತದಾರರ ಡಿಲಿಟ್ ಮಾಡಿರುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿಯ ಎದುರು ಮಂಗಳವಾರ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಧರಣಿ ಸತ್ಯಾಗ್ರಹ ನಡೆಸಿದರು.
ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ 35 ವಾರ್ಡ್ಗಳಲ್ಲಿ ಮತದಾರರ ಮತದಾನ ಡಿಲಿಟ್ ಮಾಡಲಾಗಿದ್ದು, ಇದರಿಂದ ಮತದಾರರಿಗೆ ಮತದಾನದಿಂದ ವಂಚಿತರಾಗಿದ್ದಾರೆ. ಅಲ್ಲದೇ, ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಹಲವು ಮತದಾರರ ಹೆಸರು ಡಿಲಿಟ್ ಮಾಡಲಾಗಿದೆ. ಇದರ ಹಿಂದೆ ಕಾಣದ ಕೈಗಳ ಕೈವಾಡ ಇದೆ. ಅದಕ್ಕಾಗಿ ಅವರ ಮೇಲೆ ಕಾನೂನು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು.