ವಿಜಯಪುರ: ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದಿಂದ ಪ್ರತಿಭಟನೆ ನಡೆಸಿದರು.
ವಿಜಯಪುರ ನಗರದ ಸಿದ್ಧೇಶ್ವರ ದೇವಸ್ಥಾನದಿಂದ ಡಿಸಿ ಕಚೇರಿ ವರೆಗೂ ಗುರುವಾರ ಮೆರವಣಿಗೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಬಣಜಿಗ ಸಮಾಜದ ವಿರುದ್ಧ ಹಗುರವಾಗಿ ಮಾತನಾಡಿದ ಶಾಸಕ ಯತ್ನಾಳ ಹಾಗೂ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿ, ಘೋಷಣೆ ಕೂಗಿದರು.
ಯತ್ನಾಳ, ಕಾಶಪ್ಪನವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು.