ವಿಜಯಪುರ: ಮಹಾನಗರ ಪಾಲಿಕೆ ಅನುದಾನವನ್ನು ನಗರದ ಎಲ್ಲಾ ವಾರ್ಡ್ಗಳಿಗೆ ಸಮಾನವಾಗಿ ಹಂಚಬೇಕು ಹಾಗೂ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮತದಾರರ ಡಿಲಿಟ್ ಮಾಡಿರುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿಯ ಎದುರು ಮಂಗಳವಾರ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ 35 ವಾರ್ಡ್ಗಳಿಗೆ ಅನುದಾನ ನೀಡಬೇಕು. ಅಲ್ಲದೇ, ಕೆಲವು ವಾರ್ಡ್ಗಳಲ್ಲಿ ಅಭಿವೃದ್ಧಿ ಕುಂಠಿತವಾಗಿದೆ. ಇದರಿಂದ ಸ್ಥಳೀಯರಿಗೆ ಸಮಸ್ಯೆ ಆಗುತ್ತಿದೆ. ಅದಕ್ಕಾಗಿ ಮೂಲಭೂತ ಸೌಕರ್ಯ ಅರ್ಜಿ ಅನುಸಾರ ತಯಾರಿಸಿ ಅನುದಾನ ಹಂಚಿಕೆ ಮಾಡಬೇಕು. ಅಲ್ಲದೇ, ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಹಲವು ಮತದಾರರ ಹೆಸರು ಡಿಲಿಟ್ ಮಾಡಲಾಗಿದೆ. ಇದರ ಹಿಂದೆ ಕಾಣದ ಕೈಗಳ ಕೈವಾಡ ಇದೆ. ಅದಕ್ಕಾಗಿ ಅವರ ಮೇಲೆ ಕಾನೂನು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು.