ವಿಜಯಪುರ: ಚಾಲಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿಯ ಎದುರು ಕರ್ನಾಟಕ ಚಾಲಕರ ಸಂಘದವರು ಪ್ರತಿಭಟನೆ ನಡೆಸಿದರು.
ನಮ್ಮ ವಿವಿಧ 12 ಬೇಡಿಕೆಗಳನ್ನು ಸರ್ಕಾರ ತಕ್ಷಣವೇ ಈಡೇರಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಇನ್ನು ಚಾಲಕರಿಗೆ 5 ಲಕ್ಷದವರೆಗೂ ಉಚಿತ ಅಪಘಾತ ವಿಮಾ ಸೌಲಭ್ಯ. ಚಾಲಕರ ಕುಟುಂಬಸ್ಥರಿಗೆ ಉಚಿತ ಚಿಕಿತ್ಸೆ ಸೇರಿದಂತೆ 12 ಬೇಡಿಕೆಗಳನ್ನು ಪೂರೈಸಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.