ವಿಜಯಪುರ: ಕುಡಿಯುವ ನೀರು ಸರಬರಾಜು ಮಾಡುವಂತೆ ನಗರದ ಜೈ ಕರ್ನಾಟಕ ಕಾಲೋನಿಯ ನಿವಾಸಿಗಳು ದಿಢೀರ್ ನೇ ನಗರದ ಜಲಮಂಡಳಿಯ ಕಚೇರಿಯ ಎದುರು ಪ್ರತಿಭಟನೆ ನಡೆಸಿದರು.
ನಗರಾದ್ಯಂತ ಕುಡಿಯುವ ನೀರಿನ ಹಾಹಾಕಾರ ಆರಂಭವಾಗಿದೆ. ಬೇಸಿಗೆ ಹಿನ್ನಲೆ ವಾರಕ್ಕೆ ಒಮ್ಮೆಯಾದರೂ ನೀರು ಬಿಡುವಂತೆ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ, ಇದೇ ವೇಳೆಯಲ್ಲಿ ಜಲ ಮಂಡಳಿ ಅಧಿಕಾರಿಗಳು ಹಾಗೂ ಪ್ರತಿಭಟನಾಕಾರರ ಮಧ್ಯೆ ವಾಗ್ವಾದ ನಡೆದಿದೆ. ಅದಕ್ಕಾಗಿ ತಕ್ಷಣವೇ ಜೈ ಕರ್ನಾಟಕ ಕಾಲೋನಿಗೆ ನೀರು ಸರಬರಾಜು ಮಾಡಬೇಕು ಎಂದು ಆಗ್ರಹಿಸಿದರು.