ವಿಜಯಪುರ: ಸಕ್ಕರೆ ಕಾರ್ಖಾನೆ ಮಾಲೀಕರು ಕಬ್ಬಿಣ ದರ ನಿಗದಿ ಮಾಡುತಿಲ್ಲ ಎಂದು ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಸಮೀಪ ಇರುವ ಬಸವೇಶ್ವರ ಸಕ್ಕರೆ ಕಾರ್ಖಾನೆ ಎದುರು ಇರುವ ರಾಷ್ಟ್ರೀಯ ಹೆದ್ದಾರಿ ತಡೆದು ರೈತರು ಪ್ರತಿಭಟನೆ ನಡೆಸಿದ್ದರು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಬ್ಬು ಬೆಳೆಗಾರರ ಒಕ್ಕೂಟದಿಂದ ಪ್ರತಿಭಟನೆ ಮಾಡಲಾಯಿತು. ಪ್ರತಿ ವರ್ಷದಂತೆ ಈ ವರ್ಷವೂ ಕೂಡ ರೈತರು ಬೇಡಿಕೆಯಂತೆ ಕಬ್ಬಿನ ಸೂಕ್ತ ದರ ಮಾಡುವಲ್ಲಿ ಸರ್ಕಾರ ಮತ್ತು ಸಕ್ಕರೆ ಕಾರ್ಖಾನೆಯ ಮಾಲೀಕರು ನಿರ್ಲಕ್ಷ್ಯತನ ತೋರುತ್ತಿದ್ದಾರೆ. ಒಂದು ಟನ್ ಕಬ್ಬಿಗೆ 2900 ದರವನ್ನು ಘೋಷಣೆ ಮಾಡಬೇಕೆಂದು ಒತ್ತಾಯಿಸಿದರು.