ವಿಜಯಪುರ: ಜಿಲ್ಲೆಯಲ್ಲಿ ಇಂದು ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯ ಕನ್ನಡ ಭಾಷಾ ಪರೀಕ್ಷೆಯಲ್ಲಿ 27461 ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದು, 26275 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 1186 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರ ಹಾಜರಾಗಿದ್ದರು. ಅದರಂತೆ ಅರೇಬಿಕ್ ಭಾಷಾ ಪರೀಕ್ಷೆಗೆ ಜಿಲ್ಲೆಯಲ್ಲಿ 116 ವಿದ್ಯಾರ್ಥಿಗಳು ನೊಂದಾಯಿಸಿಕೊಂಡು 116 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಡಾ.ಸಿ.ಕೆ.ಹೊಸಮನಿ ಅವರು ತಿಳಿಸಿದ್ದಾರೆ.