ಬೆಂಗಳೂರು:
ರಾಜ್ಯದಲ್ಲಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೇಸ್ ಸರ್ಕಾರದ ಹಣ ದೋಚ್ಚುವ ಸಾಹಸ ಮಾಡುತ್ತಿದೆ, ಜನರಿಗೆ ಗ್ಯಾರಂಟಿ ನೀಡುತ್ತಿರುವ ಸರ್ಕಾರ ಅಭಿವೃದ್ದಿ ಸಂಪೂರ್ಣ ಮರೆತ್ತಿದ್ದು ಈಗ ಬರಿ ಸರ್ಕಾರಿ ನಿಗಮಗಳಲ್ಲಿ ಹಣ ದೋಚ್ಚುವ ಕೆಲಸ ಮಾಡುತ್ತಿದೆ ಎಂದು ಸರ್ಕಾರದ ವಿರುದ್ದ ವಿರೋಧ ಪಕ್ಷದ ನಾಯಕ ಆರ್ ಅಶೋಕ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳುವ ಮೂಲಕ ಆರೋಪ ಮಾಡಿದರು
https://x.com/RAshokaBJP/status/1807990315485393310
ವಾಲೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂಪಾಯಿ ದಲಿತರ ಹಣವನ್ನು ಗುಳುಂ ಮಾಡಿರುವ ಸಿದ್ಧ ಹಸ್ತರು ಈಗ ಮೈಸೂರಿನ ಮುಡಾದಲ್ಲಿ 4,000 ಕೋಟಿ ಗುಳುಂ ಮಾಡುವ ಮೂಲಕ ಮತ್ತೊಮೆ ತಮ ಕೈ ಚಳಕ ಪ್ರದರ್ಶನ ಮಾಡಿದ್ದಾರೆ ಗೋಲಾಲ್ ಸಿಎಂ ಸಿದ್ದರಾಮಯ್ಯನವರೇನವರೇ, ತಮ ಧರ್ಮ ಪತ್ನಿ ಅವರ ಹೆಸರಿನಲ್ಲೂ ನಿಯಮ ಬಾಹಿರವಾಗಿ ನಿವೇಶನ ವರ್ಗಾವಣೆ ಆಗಿರುವ ಸುದ್ದಿ ಹೊರಬಂದಿದೆಯಲ್ಲ ಇದನ್ನು ಹೇಗೆ ಸಮರ್ಥನೆ ಮಾಡಿಕೊಳ್ಳುತ್ತೀರಿ? ಆರೋಪ ಕೇಳಿಬಂದಿರುವ ಮುಡಾ ಅಧಿಕಾರಿಗಳನ್ನು ಅಮಾನತು ಮಾಡದೆ, ಕೇವಲ ವರ್ಗಾವಣೆ ಮಾಡಿ ಕೈ ತೊಳೆದುಕೊಂಡಿದ್ದೀರಲ್ಲ, ಯಾರನ್ನು ರಕ್ಷಣೆ ಮಾಡಲು ಹೊರಟಿದ್ದೀರಿ? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.4,000 ಕೋಟಿ ರೂಪಾಯಿ ಮೌಲ್ಯದ ಈ ಬ್ರಹಾಂಡ ಭ್ರಷ್ಟಾಚಾರ ಪ್ರಕರಣವನ್ನು ಅಸಲಿಗೆ ಸಿಬಿಐಗೆ ವಹಿಸಬೇಕು ಅಥವಾ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ತನಿಖಾ ಆಯೋಗಕ್ಕೆ ನೀಡಬೇಕು. ಅದು ಬಿಟ್ಟು ತನಿಖೆಗೆ ಇಬ್ಬರು ಐಎಎಸ್ ಅಧಿಕಾರಿಗಳನ್ನು ನೇಮಿಸಿ ಪ್ರಕರಣವನ್ನು ಮುಚ್ಚಿಹಾಕಲು ಹೊರಟಿದ್ದೀರಲ್ಲ ಈ ಹಗರಣದಲ್ಲಿ ತಮ ಪಾಲೆಷ್ಟು? ಎಂದು ಪ್ರಶ್ನೆಸಿದ್ದಾರೆ.