ವಿಜಯಪುರ: ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ. ನಾವೆಲ್ಲರೂ ಒಗ್ಗಟ್ಟುನಿಂದ ಇದ್ದೇವಿ ಎಂದು ವಿಜಯಪುರದಲ್ಲಿ ಗುರುವಾರ ಮಾಧ್ಯಮಗೋಷ್ಠಿಯಲ್ಲಿ ಸಚಿವ ಭೈರತಿ ಬಸವರಾಜ್ ಹೇಳಿದರು. ಬಿಎಸ್ವೈ ಹಾಗೂ ಹಿರಿಯ ನಾಯಕರ ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತೇವೆ. ಮತ್ತೇ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಕೆಲಸ ಮಾಡಲಾಗುವುದು. ಆದ್ರೇ, ವಿರೋಧ ಪಕ್ಷದವರು ಇಲ್ಲಸಲ್ಲದ ಆರೋಪ ಮಾಡ್ತಾರೆ. ನಮ್ಮ ಕಾರ್ಯಕರ್ತರು ಹುಮ್ಮಸ್ಸುನಿಂದ ಇದ್ದಾರೆ ಎಂದರು.
ಅಲ್ಲದೇ, ಬಿಎಸ್ವೈಗೆ ಒಳ್ಳೆಯ ಸ್ಥಾನಮಾನ ನೀಡಲಾಗಿದೆ. ಬಿಎಸ್ವೈ ಕಡೆಗಣಿಸುವ ಮಾತೇ ಇಲ್ಲ ಎಂದರು. ಇನ್ನು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿವೈ ವಿಜಯೇಂದ್ರ ಸ್ಪರ್ಧೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಭೈರತಿ, ಯಾರು ಎಲ್ಲಿ ನಿಲ್ಲಬೇಕು ಎನ್ನುವುದು ಪಕ್ಷಕ್ಕೆ ಬಿಟ್ಟಿರುವ ವಿಚಾರ ಆಗಿದೆ. ಅದನ್ನು ಹೈ ಕಮಾಂಡ ಹಾಗೂ ಪಕ್ಷ ತೀರ್ಮಾನ ಮಾಡುತ್ತದೆ ಎಂದರು. ವಿಜಯಪುರ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಚುನಾವಣೆ ನಡೆಸಲು ಆಯುಕ್ತ ತಿಳಿಸಿದ್ದಾನೆ. ಆದಷ್ಟು ಬೇಗನೆ ಮೇಯರ್, ಉಪ ಮೇಯರ್ ಚುನಾವಣೆ ನಡೆಯುತ್ತದೆ ಎಂದರು.