ವಿಜಯಪುರ: ಮಹಿಳೆಯ ಮೇಲೆ ಇಬ್ಬರು ಅತ್ಯಾಚಾರಗೈದು, ವಿಡಿಯೋ ಮಾಡಿಕೊಂಡು ಬ್ಲ್ಯಾಕ್ಮೇಲ್ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. 32 ವರ್ಷದ ಮಹಿಳೆಯ ಮೇಲೆ ಆಕಾಶ ಹಡಗಲಿ ಹಾಗೂ ಅಭಿಷೇಕ ಸಜ್ಜನ ಅತ್ಯಾಚಾರ ಮಾಡಿದ್ದಾರೆ. ಇನ್ನು ಇಬ್ಬರು ಕೂಡಿಕೊಂಡು 32 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಮಾಡಿದ್ದಾರೆ. ಅಲ್ಲದೇ, ಅತ್ಯಾಚಾರದ ವಿಡಿಯೋವನ್ನು ಮೊಬೈಲ್ನಲ್ಲಿ ಸೆರೆ ಹಿಡಿದುಕೊಂಡು ಮಹಿಳೆಗೆ ಬ್ಲ್ಯಾಕ್ಮೇಲ್ ಮಾಡಿದ್ದಾರೆ. ಇನ್ನು ಮಹಿಳೆಯ ಕುಟುಂಬದ ಸದಸ್ಯರೊಬ್ಬರಿಗೆ ಆ ವಿಡಿಯೋ ಕಳಿಸಿದ್ದಾರೆ. ಮನೆಯಲ್ಲಿ ಮಹಿಳೆಗೆ ವಿಚಾರಿಸಿದ್ದಾಗ ಇಬ್ಬರು ಕೂಡಿ ನನಗೆ ಬಲಾತ್ಕಾರ ಮಾಡಿ, ಯಾರಿಗಾದರೂ ಮಾಹಿತಿ ತಿಳಿಸಿದ್ರೇ ಕೊಲೆ ಮಾಡುವ ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆ ಹೇಳಿದ್ದಾಳೆ. ಅದಕ್ಕಾಗಿ ಈ ಕುರಿತು ಕೇಸ್ ದಾಖಲಾಗಿದೆ. ಮಹಿಳೆ ತನ್ನ ಮಗನನ್ನು ಕರೆದುಕೊಂಡು ನಾಪತ್ತೆಯಾಗಿದ್ದಾಳೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಮನಗೂಳಿ ಪೊಲೀಸ ಠಾಣೆಯಲ್ಲಿ ಏಪ್ರಿಲ್ 27ಕ್ಕೆ ಕೇಸ್ ದಾಖಲಾಗಿದೆ.