ಗುಜರಾತ್: ಸೂಕ್ತ ಭದ್ರತೆಯ ಕಾರಣದಿಂದ (Security) ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಭ್ಯಾಸ ಮೊಟಕುಗೊಳಿಸಿರುವ ವರದಿಯಾಗಿದೆ. ಇಂದು ರಾಜಸ್ಥಾನ ರಾಯಲ್ಸ್ ವಿರುದ್ಧ ನಡೆಯಲಿರುವ ಎಲಿಮಿನೇಟರ್ ಪಂದ್ಯಕ್ಕೆ ಆರ್ಸಿಬಿ ಅಹಮಾದಾಬಾದ್ನಲ್ಲಿರುವ ಗುಜರಾತ್ ಕಾಲೇಜ್ ಅಂಗಳದಲ್ಲಿ ಅಭ್ಯಾಸ ನಡೆಸಬೇಕಿತ್ತು. ಆದರೆ ಯಾವುದೇ ಅಧಿಕೃತ ಕಾರಣ ನೀಡದೇ ಅಭ್ಯಾಸವನ್ನು ರದ್ದುಗೊಳಿಸಿತ್ತು. ಐಸಿಸ್ ನಾಲ್ವರು ಉಗ್ರರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ಪೊಲೀಸರು ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಈ ನಾಲ್ವರು ಅಹಮದಾಬಾದ್ನಲ್ಲಿ ಲ್ಯಾಂಡ್ ಆಗಿದ್ದರು. ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಪಾಕಿಸ್ತಾನದ ಹ್ಯಾಂಡ್ಲರ್ಗಳಿಂದ ಸಂದೇಶಕ್ಕಾಗಿ ಕಾಯುತ್ತಿದ್ದ ಸಂದರ್ಭದಲ್ಲಿ ಅರೆಸ್ಟ್ ಆಗಿದ್ದಾರೆ. ಬಂಧಿತರನ್ನು ಮೊಹಮದ್ ನುಸ್ರತ್, ಮೊಹಮದ್ ನಫ್ರಾನ್, ಮೊಹಮದ್ ಫಾರಿಸ್ ಮತ್ತು ಮೊಹಮದ್ ರಸ್ದೀನ್ ಎಂದು ಗುರುತಿಸಲಾಗಿದೆ.