ವಿಜಯಪುರ: ಬೈಕ್ಗೆ ಲಾರಿ ಡಿಕ್ಕಿಯಾಗಿರುವ ಪರಿಣಾಮ ಸವಾರ ಸ್ಥಳದಲ್ಲಿ ಅಸುನೀಗಿರುವ ಘಟನೆ ವಿಜಯಪುರದ ಮಾರುತಿ ಕಾಲೋನಿ ಬಳಿ ರವಿವಾರ ನಡೆದಿದೆ. ಇನ್ನೂ ಮೃತಪಟ್ಟಿರುವ ವ್ಯಕ್ತಿಯ ಹೆಸರು ಹಾಗೂ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಅಲ್ಲದೇ, ಅಪಘಾತದ ಬಳಿಕ ಲಾರಿ ಚಾಲಕ ವಾಹನದ ಸಮೇತ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ಸಂಚಾರಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.