ವಿಜಯಪುರ: ಕಾರು ಹಾಗೂ ಬೈಕ್ ಮಧ್ಯೆ ಡಿಕ್ಕಿಯಾಗಿರುವ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಝಳಕಿ ಬೈಪಾಸ್ ಬಳಿ ನಡೆದಿದೆ. ಜಿಲ್ಲೆಯ ಸಿಂದಗಿ ತಾಲ್ಲೂಕಿನ ಬಳಗಾನೂರ ಗ್ರಾಮದ ಯಲ್ಲಪ್ಪ ಗೂಗುರ (48) ಮೃತಪಟ್ಟಿರುವ ದುರ್ದೈವಿ. ಕಾರು ಚಾಲಕ ಸ್ಥಳದಲ್ಲಿ ಕಾರು ಬಿಟ್ಟು ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಝಳಕಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.