ವಿಜಯಪುರ: ಬೈಕ್ಗೆ ಅಪರಿಚಿತ ವಾಹನ ಡಿಕ್ಕಿಯಾಗಿರುವ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿ ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಢವಳಗಿ ಗ್ರಾಮದಲ್ಲಿ ನಡೆದಿದೆ.
33 ವರ್ಷದ ಸೆಂಟ್ರಿಂಗ್ ಮೇಸ್ತ್ರಿ ಹುಸೇನ್ಭಾಷಾ ಗೋಲಂದಾಜ್ ಮೃತಪಟ್ಟಿರುವ ದುರ್ದೈವಿ. ಇನ್ನು ಘಟನೆ ಬಳಿಕ ಅಪರಿಚಿತ ವಾಹನ ಸವಾರ ವಾಹನದ ಸಮೇತ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.