ವಿಜಯಪುರ: ಅಪರಿಚಿತ ವಾಹನ ಬೈಕ್ಗೆ ಡಿಕ್ಕಿಯಾಗಿರುವ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ತಂಗಡಗಿ ಕ್ರಾಸ್ ಬಳಿ ನಡೆದಿದೆ.
ಬಾಗಲಕೋಟ ಜಿಲ್ಲೆ ಕಿರಸೂರ ಗ್ರಾಮದ ಸಂಗಪ್ಪ ಭೀಮಶೆಪ್ಪ ಈರಗಾರ (35) ಎಂದು ಗುರುತಿಸಲಾಗಿದೆ.
ಡಾಬಾ ಒಂದರಲ್ಲಿ ಕೆಲಸ ಮಾಡುತ್ತಿದ್ದ ಎನ್ನುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಬೈಕ್ನಲ್ಲಿ ಹೋಗುವಾಗ ಈ ದುರ್ಘಟನೆ ಸಂಭವಿಸಿದೆ. ಮುದ್ದೇಬಿಹಾಳ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.