ವಿಜಯಪುರ: ಹಾಡು ಹಚ್ಚುವ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಮಧ್ಯೆಯೇ ಗಲಾಟೆಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದಲ್ಲಿ ರವಿವಾರ ರಾತ್ರಿ ನಡೆದಿದೆ.
ಮಾಜಿ ಸಚಿವ ಎಸ್.ಕೆ ಬೆಳ್ಳುಬ್ಬಿ, ಬಿಜೆಪಿ ಮುಖಂಡ ಅಪ್ಪುಗೌಡ ಪಾಟೀಲ್ ಬೆಂಬಲಿಗರ ನಡುವೆ ಮಾತಿನ ಚಕಮಕಿ ಆಗಿದೆ. ನಾಯಕರ ಮುಂದೇಯೇ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ಮಾಡಿಕೊಂಡಿದ್ದಾರೆ. ಗೊಳಸಂಗಿಯಲ್ಲಿ ರೈತ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮ ಮುಗಿಸಿ ಮನೆಗೆ ತೆರಳುವ ವೇಳೆ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ಆಗಿದೆ. ಈ ವೇಳೆ ಪೊಲೀಸರು ಮಧ್ಯ ಪ್ರವೇಶಿಸಿ ಗಲಾಟೆ ತಿಳಿಗೊಳಿಸಿದರು.
ಬಿಜೆಪಿ ಕಾರ್ಯಕರ್ತರ ಮಧ್ಯೆ ಗಲಾಟೆ
![](https://karnataka1news.com/wp-content/uploads/2023/03/IMG_20230306_121711-860x480.jpg)