ವಿಜಯಪುರ: ಮಿನಿ ಕ್ಯಾಂಟರ್ ಹಾಗೂ ಟಂಟಂ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿರುವ ಪರಿಣಾಮ ಓರ್ವ ಸ್ಥಳದಲ್ಲಿ ಅಸುನೀಗಿರುವ ಘಟನೆ ವಿಜಯಪುರ ತಾಲ್ಲೂಕಿನ ಮಧಬಾವಿ ಕ್ರಾಸ್ ಬಳಿ ನಡೆದಿದೆ.
ಇನ್ನು ಅಪಘಾತದಲ್ಲಿ ಸಾವನ್ನಪ್ಪಿದವರ ಬಗ್ಗೆ ಹೆಸರು ಹಾಗೂ ಮಾಹಿತಿ ಲಭ್ಯವಾಗಿಲ್ಲ. ಅಲ್ಲದೇ, ಅಪಘಾತದ ಬಳಿಕ ಟಂಟಂ ವಾಹನ ರಸ್ತೆ ಪಕ್ಕದಲ್ಲಿ ಪಲ್ಟಿಯಾಗಿದೆ. ಇನ್ನು ಎರಡು ವಾಹನಗಳು ಜಖಂಗೊಂಡಿವೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
![](https://karnataka1news.com/rugleeps/2022/08/IMG-20220831-WA0059.jpg)