ವಿಜಯಪುರ: ಬೈಕ್ ಹಾಗೂ ಕ್ರೂಜರ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿರುವ ಪರಿಣಾಮ ಓರ್ವ ಸ್ಥಳದಲ್ಲಿಯೇ ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ತಳೇವಾಡ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ.
39 ವರ್ಷದ ಸಂಗಪ್ಪ ಸಿಂದಗಿ ಮೃತಪಟ್ಟಿರುವ ಬೈಕ್ ಸವಾರ. ಮತ್ತೋರ್ವ ಸವಾರ ಮಲ್ಲಪ್ಪ ಬಾಲ್ಯಾಳ ಗಂಭೀರವಾಗಿ ಗಾಯಗೊಂಡಿದ್ದು, ವಿಜಯಪುರ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನೂ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೂಡಗಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.