ವಿಜಯಪುರ: ಮಕ್ಕಳ ಕಳ್ಳನೆಂದು ಯುವಕನನ್ನು ಹಿಡಿದು ಸ್ಥಳೀಯರು ಥಳಿಸಿರುವ ಘಟನೆ
ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ಇಟ್ಟಂಗಿಹಾಳ ಗ್ರಾಮದಲ್ಲಿ ನಡೆದಿದೆ.
ಅಪರಿಚಿತ ಯುವಕನನ್ನು ಹಿಡಿದು ಸ್ಥಳೀಯರು ಥಳಿಸಿ, ಎಲ್ಲಿಂದ ಬಂದಿದ್ದೀಯಾ? ಎಷ್ಟು ಜನ ಬಂದಿದ್ದೀರಿ ಎಂದು ವಿಚಾರಿಸಿದರು. ಮಕ್ಕಳ ಕದಿಯಲು ಬಂದಿದ್ದೀರಾ ಎಂದು ಯುವಕನಿಗೆ ಹಲ್ಲೆ ಮಾಡಿದ್ದಾರೆ. ಇನ್ನೂ ಅಪರಿಚಿತ ಯುವಕನ್ನು ಪೊಲೀಸರು ವಶಕ್ಕೆ ಪಡೆದುಕೊಂಡು, ತನಿಖೆ ನಡೆಸುತ್ತಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.