ವಿಜಯಪುರ: ಕಾಂಗ್ರೆಸ್ ಕಚೇರಿಗೆ ಮತ್ತೇ ಸಾವರ್ಕರ್ ಫೋಟೊ ಅಂಟಿಸಿದ ಬಿಜೆಪಿ ಜಿಲ್ಲಾಧ್ಯಕ್ಷ, ಉಪ ಜಿಲ್ಲಾಧ್ಯಕ್ಷ ಸೇರಿದಂತೆ ಹಲವರು ವಿರುದ್ಧ ದೂರು ನೀಡಲಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಜು ಆಲಗೂರ ಮಾಹಿತಿ ನೀಡಿದರು.
ವಿಜಯಪುರದ ಕಾಂಗ್ರೆಸ್ ಕಚೇರಿಯಲ್ಲಿಂದು ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಜಿಲ್ಲಾಧ್ಯಕ್ಷ ಕೂಚಬಾಳ್, ಉಪಾಧ್ಯಕ್ಷ ಉಮೇಶ ಕಾರಜೋಳ ಸೇರಿದಂತೆ ಹಲವರು ವಿರುದ್ಧ ದೂರು ನೀಡಲಾಗಿದೆ. ಅದಕ್ಕಾಗಿ ಜಿಲ್ಲಾ ಪೊಲೀಸ ಇಲಾಖೆ ಇವರ ಮೇಲೆ ಕಾನೂನು ಕ್ರಮಕ್ಕೆ ಮುಂದಾಗಬೇಕು. ಇನ್ನು ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಆಗದಂತೆ ಪೊಲೀಸ ಇಲಾಖೆ ಸೂಕ್ತ ಬಂದೋಬಸ್ತ್ ಕೈಗೊಳ್ಳಬೇಕು ಎಂದರು.