ವಿಜಯಪುರ; ಶಿವಾಜಿ ಮಹಾರಾಜರಿಗೆ ಅವಮಾನ ಮಾಡಿದ ಮೂವರನ್ನು ಪೊಲೀಸರು ಬಂಧಿಸಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ನಡೆದಿದೆ. ಕಾನೂನು ಸಂಘರ್ಷಕ್ಕೆ ಒಳಗಾದ ಇಬ್ಬರು ಹಾಗೂ ಕಾಸೀಂಸಾಬ್ ಮಕಾಂದಾರ್ ಬಂಧಿತರು. ಇನ್ನೂ ಶಿವಾಜಿ ಮಹಾರಾಜರ ಫೋಟೊ ಎಡಿಟ್ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಮಾಡಿದ್ದರು. ಅದಕ್ಕಾಗಿ ಪೊಲೀಸರು ತನಿಖೆ ನಡೆಸಿ ಮೂವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕೊಲ್ಹಾರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.