ಕಲಬುರಗಿ: ನಿಂತಿದ್ದ ಕಂಟೇನರ್ಗೆ ಸ್ವೀಫ್ಟ್ ಡಿಸೈರ್ ಕಾರು ಡಿಕ್ಕಿಯಾಗಿರುವ ಪರಿಣಾಮ ಸಿಂದಗಿ ಸಿಪಿಐ ಹಾಗೂ ಅವರ ಧರ್ಮಪತ್ನಿ ಸ್ಥಳದಲ್ಲಿಯೇ ಅಸುನೀಗಿರುವ ಘಟನೆ ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ನೇಲೋಗಿ ಕ್ರಾಸ್ ಬಳಿ ನಡೆದಿದೆ.
ರವಿ ಉಕ್ಕುಂದ (43) ಹಾಗೂ ಪತ್ನಿ ಮಧು ಪತ್ನಿ (40) ಸ್ಥಳದಲ್ಲಿಯೇ ಮೃತಪಟ್ಟಿರುವ ದುರ್ದೈವಿ. ಇನ್ನು ನಿಂತಿದ್ದ ಕಂಟೇನರ್ಗೆ ಸ್ವೀಫ್ಟ್ ಡಿಸೈರ್ ಕಾರು ಡಿಕ್ಕಿಯಾಗಿದೆ. ಇನ್ನೂ
ಸಿಂದಗಿಯಿಂದ ಕಲಬುರಗಿ ನಗರಕ್ಕೆ ಆಗಮಿಸುತ್ತಿದ್ದರು. ಈ ವೇಳೆ ಕಂಟೇನರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ನುಜ್ಜುಗುಜ್ಜು ಆಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನೇಲೋಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.