ವಿಜಯಪುರ: ಕೌಟುಂಬಿಕ ಕಲಹ ಹಿನ್ನಲೆ ಅಕ್ಕ ಹಾಗೂ ತಮ್ಮನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬೂದಿಹಾಳ ಗ್ರಾಮದಲ್ಲಿ ನಡೆದಿದೆ.
ನಾನಾಗೌಡ ಯರಗಲ್ಲ, ರಾಜಶ್ರೀ ಯರಗಲ್ಲ ಹತ್ಯೆಯಾಗಿರುವವರು. ಇನ್ನು ಶಂಕರಲಿಂಗ ಬಿರಾದಾರ ಹತ್ಯೆಗೈದಿರುವ ಆರೋಪಿ. ಇನ್ನು ಕೌಟುಂಬಿಕ ಕಲಹ ಹಿನ್ನಲೆ ಅಕ್ಕನ ಗಂಡ ಬಿರಾದಾರ ಹತ್ಯೆಗೈದು ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಸಿಂದಗಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಹತ್ಯೆಗೈದು ಕೊಲೆ ಆರೋಪಿ ಪರಾರಿಯಾಗಿದ್ದು, ಆತನ ಪತ್ತೆ ಕಾರ್ಯಾಚರಣೆ ನಡೆದಿದೆ. ಸಿಂದಗಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.