ವಿಜಯಪುರ: ಅಥಣಿ ಶಾಸಕ ಮಹೇಶ ಕುಮಟಳ್ಳಿಗೆ ಟಿಕೆಟ್ ನೀಡಬೇಕು. ಇಲ್ಲದೇ ಹೋದರೆ ನಾನು ಸಹ ಗೋಕಾಕ್ ನಿಂದ ನಿಲ್ಲುವುದಿಲ್ಲ ಎಂದು ಶಾಸಕ ರಮೇಶ ಜಾರಕಿಹೊಳಿ ಬಾಂಬ್ ಸಿಡಿಸಿದರು.
ವಿಜಯಪುರ ನಗರದಲ್ಲಿ ಶುಕ್ರವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿಯಲ್ಲಿ 13 ಸ್ಥಾನಗಳಲ್ಲಿ ಬಿಜೆಪಿ ಗೆದ್ದಿದೆ. ಈ ಬಾರಿ ಇನ್ನೂ ಎರಡು ಸ್ಥಾನ ಹೆಚ್ಚಿಗೆ ಗೆಲ್ಲಿಸುವ ಪ್ರಯತ್ನ ಮಾಡುವೆ ಎಂದರು. ಕಾಂಗ್ರೆಸ್ ಮುಳುಗುವ ಹಡಗು. ಈಗ ಕಾಂಗ್ರೆಸ್ಗೆ ಹೋಗಿ ಏನು ಮಾಡುವುದು. ಬಿಜೆಪಿ ತತ್ವ ಸಿದ್ದಾಂತ ನಂಬಿ ಕಾಂಗ್ರೆಸ್ ಬಿಟ್ಟು ಬಂದಿದ್ದೇನೆ. ಬಿಜೆಪಿ ದೊಡ್ಡ ಪ್ರವಾಹ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಿಜೆಪಿಯನ್ನು ಕೊಂಡಾಡುತ್ತಿದ್ದಾರೆ ಎಂದರು.