ವಿಜಯಪುರ: ಮನೆಯಲ್ಲಿ ಲಾಕ್ ಮಾಡಿಟ್ಟಿದ್ದ ಸ್ಪೋರ್ಟ್ಸ್ ಸೈಕಲ್ವೊಂದನ್ನು ಕಳ್ಳರು ಕಳುವು ಮಾಡಿಕೊಂಡು ಪರಾರಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಹುಡ್ಕೋದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಎಂ.ಎನ್.ಮದರಿ ಎಂಬುವರ 16ಸಾವಿರ ಮೌಲ್ಯದ ಸೈಕಲ್ನ್ನು ಕಳ್ಳರು ಕಳವು ಮಾಡಿಕೊಂಡು ಪರಾರಿಯಾಗಿದ್ದಾರೆ. ಕಳ್ಳತನದ ದೃಶ್ಯಗಳು ಮನೆಯಲ್ಲಿರುವ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮುದ್ದೇಬಿಹಾಳ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.